ಯಾದಗಿರಿ: ಶಾಲೆಗಿಂತ ನಮಗೆ ಹಿಜಾಬ್ ಮುಖ್ಯ ಎಂದು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕೆಂಬಾವಿ ಪದವಿ ಪೂರ್ವ ಕಾಲೇಜಿನ ಎಂಟು ವಿದ್ಯಾರ್ಥಿನಿಯರು ಪರೀಕ್ಷೆ ತೊರೆದು ಮನೆಗೆ ತೆರಳಿದ ಪ್ರಸಂಗ ನಡೆದಿದೆ.
ಹಿಜಾಬ್ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಲಿದೆ ಎಂದು ಕಾದು ಕುಳಿತಿದ್ದ ಎಂಟು ವಿದ್ಯಾರ್ಥಿನಿಯರು ತೀರ್ಪು ಪ್ರಕಟವಾಗುತ್ತಿದ್ದಂತೆ ಪರೀಕ್ಷೆ ತೊರೆದು ಮನೆಗಳಿಗೆ ತೆರಳಿದರು.
ಮಂಗಳವಾರ ಇಂಗ್ಲಿಷ್ ಭಾಷೆ ಪರೀಕ್ಷೆ ನಡೆಯುತ್ತಿದ್ದರೂ ವಿದ್ಯಾರ್ಥಿನಿಯರು ಅದನ್ನು ಲೆಕ್ಕಿಸದೆ ನಮಗೆ ಶಾಲೆಗಿಂತ ಹಿಜಾಬ್ ಮುಖ್ಯ ಎಂದು ಮನೆಗಳಿಗೆ ಹೊರಟರು.
ಈ ಕುರಿತು ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿ ಅಫ್ರಿನಾ ಭಾನು ನಾವು ಹಿಂದಿನಿಂದಲೂ ಹಿಜಾಬ್ ಧರಿಸಿಕೊಂಡೇ ಶಾಲೆಗೆ ಹೋಗುತ್ತಿದ್ದೆವು. ನಮ್ಮ ಪದ್ಧತಿಗೆ ನ್ಯಾಯಾಲಯ ಅನುಮೋದನೆ ನೀಡಲಿದೆ ಎಂದು ಭಾವಿಸಿದ್ದೆವು. ಆದರೆ, ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ತೀರ್ಪು ಬಂದಿರುವುದರಿಂದ ನಾವು ಪರೀಕ್ಷೆ ತೊರೆದು ಮನೆಗೆ ತೆರಳಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

