ಮೈಸೂರು: ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಸಿಹಿ ನಿದ್ದೆಯಲ್ಲಿದ್ದ ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಜಯನಗರ ಪೊಲೀಸ್ ಠಾಣಾ ಇನ್ಸಪೆಕ್ಟರ್ ಬಾಲಕೃಷ್ಣ ಹೆಚ್.ಎನ್ ಅವರ ವಿಜಯನಗರ ಎರಡನೇ ಹಂತದಲ್ಲಿರುವ ನಿವಾಸ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆ ವಶಪಡಿಸಿಕೊಂಡಿದ್ದಾರೆ.
ಬಾಲಕೃಷ್ಣ ಹೆಚ್.ಎನ್ ಅವರ ಮೇಲೆ ಅಕ್ರಮ ಆಸ್ತಿ ಸಂಪಾದನೆ ಕುರಿತ ಹಲವು ಬಾರಿ ದೂರುಗಳು ಬಂದಿತ್ತು ಈ ದೂರುಗಳನ್ನಾಧರಿಸಿ ದಾಳಿ ನಡೆಸಲಾಗಿದೆ.

