ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಕುರಿತು ಸಿಎಂ ಜತೆ ಚರ್ಚೆ -ಅಶೋಕ್

ಬೆಂಗಳೂರು: ಪುನೀತ್ ರಾಜ್‍ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಬೇಕೆಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದು ಈ ಬಗ್ಗೆ ಮುಖ್ಯಮಂತ್ರಿ  ಅವರ ಜೊತೆ ಚರ್ಚಿಸಲಾಗುವುದು ಎಂದು  ಸಚಿವ ಆರ್.ಅಶೋಕ್ ಹೇಳಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ನಟ ಪುನೀತ್ ರಾಜ್‍ಕುಮಾರ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದರು.

ಪುನೀತ್ ನಮ್ಮನ್ನ ಅಗಲಿದ್ದರೂ ಅವರು ಜೀವಂತ ಇರುವ ರೀತಿ ಅಭಿಮಾನಿಗಳು ಜನ್ಮದಿನದ ಆಚರಣೆ ಮಾಡುತ್ತಿದ್ದಾರೆ. ಎಂದು ಹೇಳಿದರು.

ಹಿಜಬ್ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಚರಿತ್ರಾರ್ಹವಾಗಿದೆ. ಆದರೂ ಕೆಲವರು ರಾಷ್ಟ್ರ ವಿರೋಧಿಗಳಾಗಿ ಬಂದ್‍ ಕರೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನ್ಯಾಯಾಲಯದ ಆದೇಶ ಪಾಲಿಸುವುದು ಎಲ್ಲರ ಕರ್ತವ್ಯ. ಹೈಕೋರ್ಟ್ ಆದೇಶದ ವಿರುದ್ಧವೇ ಬಂದ್‍ಗೆ ಕರೆ ನೀಡಿರುವುದು ಕಾನೂನು ವಿರೋಧಿಯಾಗಿದೆ ಎಂದು ಅಶೋಕ್ ಹೇಳಿದರು.

ಕೋರ್ಟ್ ಆದೇಶ ಉಲ್ಲಂಘಿಸಿ ದೇಶಕ್ಕೆ ಅವಿಧೇಯವಾಗಿ ನಡೆದುಕೊಳ್ಳುವವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿದ್ದು ದುಷ್ಟ ಶಕ್ತಿಗಳನ್ನ ಮಟ್ಟ ಹಾಕಲಿದೆ ಎಂದು ಹೇಳಿದರು.