ಮೇಕೆದಾಟು ವಿಚಾರದಲ್ಲಿ ಸರ್ಕಾರ ಬದ್ದತೆ ತೋರಲಿ -ಎಚ್ ಡಿ ಕೆ ಆಗ್ರಹ

ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನದ ವಿಚಾರದಲ್ಲಿ ಸರ್ಕಾರ ಬದ್ದತೆ ತೋರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು ಈಗ ಮೇಕೆದಾಟು ಯೋಜನೆ ಸರ್ಕಾರದ ಕೈಯಲ್ಲಿದೆ. ನಮ್ಮ ನೀರನ್ನು ಪಡೆಯುವುದರಲ್ಲಿ ಅನ್ಯಾಯ ಆಗಿದೆ. ಅದನ್ನು ಸರ್ಕಾರ ತ್ವರಿತಗತಿಯಲ್ಲಿ ಸರಿಪಡಿಸಬೇಕು ಎಂದು ಹೇಳಿದರು.

ತಮಿಳುನಾಡಿನ ವಿಧಾನಸಭೆಯಲ್ಲಿ  ಎಲ್ಲಾ ಪಕ್ಷಗಳು ಮೇಕೆದಾಟು ಯೋಜನೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಬಾರದು ಎಂದು ನಿರ್ಣಯ ಪಾಸ್ ಮಾಡಿದ್ದಾರೆ. ಅಕ್ಕಪಕ್ಕದ ರಾಜ್ಯಗಳ ಮೇಲೆ ಅದರಲ್ಲೂ ಕರ್ನಾಟಕದ ಮೇಲೆ ತಮಿಳುನಾಡು ಸರ್ಕಾರ ಒತ್ತಡ ಹೇರುವಂತದ್ದು ನಿರಂತರವಾಗಿ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಬೇಸರ ಪಟ್ಟರು.

ಬೆಂಗಳೂರು ನಗರಕ್ಕೆ ಹೆಚ್ಚುವರಿ ನೀರನ್ನು ಪಡೆಯುವ ಹಕ್ಕಿದೆ. ತಮಿಳುನಾಡಿನ ಪಾಲಿನ ನೀರನ್ನು ಕೊಡದಿದ್ದಾಗ ಅವರು ಕೇಳಬೇಕು ಎಂದು ಹೇಳಿದರು.

ನಮ್ಮ ಭಾಗದಲ್ಲಿ ಜಲಾಶಯ ಕಟ್ಟೋಕೆ ತಕರಾರು ಇಲ್ಲ ಎಂದು ತಮಿಳುನಾಡು ವಕೀಲರೆ ಹೇಳಿದ್ದಾರೆ.ನಮಗೆ ಪರಿಸರ ಇಲಾಖೆ ಅನುಮತಿ ಬೇಕಾಗಿದೆ. ಅವರ ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ ಎಂದು ತಿಳಿಸಿದರು.

ಸರ್ಕಾರ 1000  ಕೋಟಿ ರೂ. ಇಟ್ಟರೆ ಸಾಲದು ಮೊದಲು ಕೆಲಸ ಆಗಬೇಕು. ಕಾವೇರಿ ಡೆಲ್ಟಾ ಜಾಗದಲ್ಲಿ ತಮಿಳುನಾಡು ಸರ್ಕಾರ ಕೆಲ ಚಟುವಟಿಕೆ ನಡೆಸುತ್ತಿದೆ.ಆದರೆ ಕೇಂದ್ರ ಸರ್ಕಾರ ತಮಿಳುನಾಡು ಚಟುವಟಿಕೆಗೆ ವಿರೋಧ ಮಾಡಿಲಿಲ್ಲ ಎಂದು ಅಸಮಾಧಾನ ಪಟ್ಟರು.

ಮೇಕೆದಾಟು ಯೋಜನೆಯನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂದು ಮಾಜಿ ಪ್ರಧಾನಿ ದೇವೆಗೌಡರು ಸರ್ಕಾರಕ್ಕೆ ಎರಡು ರೀತಿಯ ಸಲಹೆ ನೀಡಿದ್ದಾರೆ. ನಾನು ಕೂಡ ಸದನದಲ್ಲಿ ಪ್ರಸ್ತಾಪಿಸಿದ್ದೇನೆ. ಸರ್ವಪಕ್ಷ ನಾಯಕರನ್ನು ದೆಹಲಿಗೆ ಕರೆದೊಯ್ಯುವ ವಿಚಾರವನ್ನು ಸಭೆಯಲ್ಲಿ ಹೇಳಿದ್ದಾರೆ.

ಏನೇನು ಮಾಡುತ್ತಾರೆ ಎಂಬುದನ್ನು ನೋಡೋಣ ಎಂದು ಎಚ್ ಡಿ ಕೆ ತಿಳಿಸಿದರು.