ಜೇಮ್ಸ್ ಚಿತ್ರಕ್ಕೆ ಯಾರೂ ವಿರೋಧ ಮಾಡಿಲ್ಲ -ಆರಗ ಜ್ಞಾನೇಂದ್ರ

ಬೆಂಗಳೂರು: ಜೇಮ್ಸ್ ಚಿತ್ರಕ್ಕೆ ಯಾರೂ ವಿರೋಧ ಮಾಡುತ್ತಿಲ್ಲ. ವಿನಾಕಾರಣ ಜನರ ಮನಸ್ಸನ್ನು ಹಾಳು ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಜೇಮ್ಸ್ ಚಿತ್ರವೇ ಬೇರೆ, ಕಾಶ್ಮೀರಿ ಫೈಲ್ಸ್ ಚಿತ್ರವೇ ಬೇರೆ ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಜೇಮ್ಸ್ ಚಿತ್ರಕ್ಕೆ ಬಿಜೆಪಿಯ ಕೆಲ ಶಾಸಕರು ಹಲವೆಡೆ ಅಡ್ಡಿ ಮಾಡುತ್ತಿದ್ದಾರೆಂಬ ಆರೋಪಕ್ಕೆಈ ರೀತಿ ಪ್ರತಿಕ್ರಿಯಿಸಿ ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.

ಜಾತ್ರೆಗಳಲ್ಲಿ ಒಂದು ಕೋಮಿನ ವ್ಯಾಪಾರಸ್ಥರಿಗೆ ಅವಕಾಶ ನೀಡದಿರುವ ವರದಿಯನ್ನು ಮಾಧ್ಯಮದಲ್ಲಿ ಗಮನಿಸಿದ್ದೇನೆ, ಈ ಸಂಬಂಧ ಪೊಲೀಸರಿಂದ ವರದಿ ಕೇಳಿದ್ದೇನೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಈ ರೀತಿ ಜನರ ಮನಸ್ಸು ಒಡೆಯಬಾರದು ಇದು ದುರದೃಷ್ಟಕರ. ನಾವು ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇವೆ. ಶಾಂತಿ ಸುವ್ಯವಸ್ಥೆ ಕದಡದಂತೆ ನೋಡಿಕೊಳ್ಳುತ್ತೇವೆ.

ಈ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಬಂದ ಬಳಿಕ ಒಂದು ಕೋಮಿನವರು ಅಂಗಡಿ ಬಂದ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಹೀಗೆ ಮಾಡಿರಬಹುದು. ಈ ಸಂಬಂಧ ವರದಿ ಪಡೆಯಲಾಗುವುದು ಎಂದು ಗೃಹ ಸಚಿವರು ಹೇಳಿದರು.