ಅಪ್ಪುಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ನಟ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲಾಯಿತು.

ಬೆಂಗಳೂರಿನ ಸದಾಶಿವನಗರದಲ್ಲಿರುವ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.