ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ

ಬೆಂಗಳೂರು: ಸೋಮವಾರದಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ಕಾರಿ ಶಾಲೆ ಮಕ್ಕಳು ಕಡ್ಡಾಯವಾಗಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರ ಧರಿಸಿಯೇ ಹಾಜರಾಗಬೇಕೆಂದು ಆದೇಶಿಸಲಾಗಿದೆ.

ಒಂದು ವೇಳೆ ಹಿಜಾಬ್ ಧರಿಸಿ ಬಂದರೆ ಅಂಥವರಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಕೊಠಡಿಯೊಳಗೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳ ಹೊರತುಪಡಿಸಿ ಹಿಜಾಬ್ ಧರಿಸಿದ್ದರೆ ಅಂಥವರಿಗೆ ಕೊಠಡಿ ಪ್ರವೇಶಕ್ಕೂ ಅವಕಾಶ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಸಮವಸ್ತ್ರ, ಖಾಸಗಿ(ಅನುದಾನಿತ, ಅನುದಾನ ರಹಿತ) ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿಗದಿಪಡಿಸಿರುವ ಸಮವಸ್ತ್ರದ ಜೊತೆಗೆ ಪ್ರವೇಶ ಪತ್ರಗಳೊಂದಿಗೆ ವಿದ್ಯಾರ್ಥಿಗಳು ಹಾಜರಾಗಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.