ಬ್ಯಾಂಕ್ ನೌಕರರ ಪ್ರತಿಭಟನೆ

ಮೈಸೂರು:‌ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ವತಿಯಿಂದ ಎರಡು ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಂಡಿದ್ದು, ಮೈಸೂರಿನಲ್ಲಿಯೂ ಬ್ಯಾಂಕ್ ನೌಕರರು ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ಮೈಸೂರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ   ಸಿಬ್ಬಂದಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದರು.

ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ಬಲಪಡಿಸಬೇಕು, ಬ್ಯಾಂಕ್ ಗಳ ಖಾಸಗೀಕರಣವನ್ನು ನಿಲ್ಲಿಸಬೇಕು,ಎನ್ ಪಿಎಸ್ ತೆಗೆದುಹಾಕಬೇಕು, ಡಿಎ ಲಿಂಕ್ಸ್ ಪಿಂಚಣಿಯೋಜನೆಯನ್ನು ಮರುಸ್ಥಾಪಿಸಬೇಕು ಎಂಬುದು ಸೇರಿದಂತೆ ‌ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆನರಾ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಹೆಚ್.ಸೇರಿದಂತೆ ಹಲವರು ಪಾಲ್ಗೊಂಡಿದ್ದರು.