ಮೈಸೂರು: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಸುತ್ತೂರು ಮಠದಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಬಿ ಎಸ್ ವೈ,
ಮುಂಬರುವ ಚುನಾವಣೆಯಲ್ಲಿ140 ಸ್ಥಾನ ಪಡೆದು ಮತ್ತೆ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಏ.1 ರಂದು ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ.ನಂತರ ರಾಜ್ಯಾದ್ಯಂತ ಬಿಜೆಪಿ ನಾಯಕರ ಪ್ರವಾಸ ಆರಂಭವಾಗಲಿದೆ ಎಂದು ತಿಳಿಸಿದರು.
3-4 ತಂಡಗಳಾಗಿ ಪ್ರವಾಸ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಬಿಜೆಪಿಗೆ ಅನುಕೂಲಕರ ವಾತಾವರಣವಿದೆ. ಬೊಮ್ಮಾಯಿ ಅವರ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ, ಮುಖ್ಯ ಮಂತ್ರಿ ಗಳ ಬದಲಾವಣೆ ಖಂಡಿತಾ ಇಲ್ಲ ಕಾರ್ಯಕರ್ತರು ಊಹಾಪೂಹಗಳಿಗೆ ಕಿವಿ ಕೊಡಬಾರದು ಎಂದು ಯಡಿಯೂರಪ್ಪ ಮನವಿ ಮಾಡಿದರು.
ವಿಜಯೇಂಧ್ರ ಸಂಪುಟ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ಈ ಕುರಿತಜ ಯಾವುದೇ ಚರ್ಚೆ ಮಾಡಿಲ್ಲ ಎಂದು ಹೇಳಿದರು.
ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಆಗಲಿದೆಯಾ ಎಂದು ಕೇಳಿದ ಪ್ರಶ್ನೆಗೆ ನೂರಕ್ಕೆ ನೂರು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಹಿಂದುಳಿದ ವರ್ಗದವರನ್ನು ನಮ್ಮ ಜೊತೆ ತೆಗೆದುಕೊಳ್ಳುವ ಪ್ರಯತ್ನ ಆಗಬೇಕಿದೆ ಎಂದು ತಿಳಿಸಿದರು.
ಅವರೆಲ್ಲರೂ ನಮ್ಮ ಜೊತೆ ಇದ್ದಾರೆ, ಮಹಿಳಾ ಸಬಲೀಕರಣ ಮೂಲಕ ಸಂಘಟನೆಯನ್ನು ಬಲಪಡಿಸುವಂತಹ ಪ್ರಯತ್ನವನ್ನು ಮಾಡುತ್ತಿದ್ದೇವೆ. ನೂರಕ್ಕೆ ನೂರು ಅದರಲ್ಲಿ ಯಶಸ್ವಿಯಾಗುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

