ಕೇಜ್ರಿವಾಲ್ ಸಮ್ಮುಖದಲ್ಲಿ AAP ಸೇರಿದ ಭಾಸ್ಕರ್ ರಾವ್

ನವದೆಹಲಿ: ನಿವೃತ್ತ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ದೆಹಲಿಯ ಆಪ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್​ ಅವರಿಗೆ ದೆಹಲಿ ಮುಖ್ಯಮಂತ್ರಿ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷದ ಧ್ವಜವನ್ನ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.

ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿದರು.

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿರುವ ಅವರು, ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಅಪಾರ ಜ್ಞಾನವನ್ನ ಹೊಂದಿರುವ ರಾವ್, ಇದೀಗ ರಾಜಕಾರಣದ ಮೂಲಕ ಸಾಮಾಜಿಕ ಸೇವೆಗೆ ಮುಂದಾಗಿದ್ದಾರೆ.

ಈ ವೇಳೆ ಕರ್ನಾಟಕದ ಆಪ್ ಪಕ್ಷದ ಉಸ್ತುವಾರಿ ಮತ್ತು ಶಾಸಕ ದೀಲಿಪ್ ಪಾಂಡೆ, ಕರ್ನಾಟಕದ ರಾಜ್ಯಾಧ್ಯಕ್ಷ ಪೃಥ್ವಿ ರಡ್ಡಿ, ಪ್ರಧಾನ ಕಾರ್ಯದರ್ಶಿ ಸಂಚಿತ್ ಸಾವನಿ, ಎಂ ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.