ಜಮ್ಮು: ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಗ್ರಾಮವೊಂದರಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿವೆ.
ಈ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.
ನೂರಕೋಟೆ ಗ್ರಾಮದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆಯಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.
ಅಲ್ಲಿ ಅಪಾರ ಮದ್ದುಗುಂಡುಗಳು ಎರಡು ಎಕೆ-47 ರೈಫಲ್, ಚೈನೀಸ್ ಪಿಸ್ತೂಲ್, ಗುಂಡುಗಳ ಕಾಟ್ರೇಜ್ ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆ ವೇಳೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

