ಸರ್ಕಾರಿ ನೌಕರರಿಗೆ ಬಂಪರ್

ಬೆಂಗಳೂರು: ಯುಗಾದಿ ಹಬ್ಬದ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ಸಿಕ್ಕಿದೆ.

ಜನವರಿ 1ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.2.75ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಹೆಚ್ಚಳ ಮಾಡುವುದರಿಂದ ಸರ್ಕಾರದ ಬೊಕ್ಕಸಕ್ಕೆ 1447 ಕೋಟಿ ರೂ. ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.