ಕಾಂಗ್ರೆಸ್ ನವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ -ಬೊಮ್ಮಾಯಿ ಟೀಕೆ

ಬೆಂಗಳೂರು: ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್‍ ನವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,ದೇಶದಲ್ಲಿ ಅತಿಹೆಚ್ವು ಬೆಲೆ ಏರಿಕೆ ಮಾಡಿದ ಕೀರ್ತಿ ಹಾಗೂ ದಾಖಲೆ ಕಾಂಗ್ರೆಸ್ ನದ್ದು ಎಂದು ತಿರುಗೇಟು ನೀಡಿದರು.

ಪಿಎಫ್‍ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಮಸ್ಕಾನ್ ಗೆ ಅಲ್ ಖೈದಾ ಮುಖ್ಯಸ್ಥ ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಪತ್ರ ಬರೆದಿದ್ದಾರಲ್ಲ ಈ ಬಗ್ಗೆ ತನಿಖೆ ನಡೆಯಲಿದೆಯೆ ಎಂಬ ಸುದ್ದಿಗಾರರ ಪ್ರಶ್ನೆಗೆ    ಹೆಗಡೆ ಅವರ ಬಳಿ ಇರುವ ಮಾಹಿತಿ  ತಿಳಿದುಕೊಂಡು ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಸುಮಲತಾ ತಮ್ಮ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಈ ವೇಳೆ ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಬೇರೆ ಯಾವ ವಿಷಯ ಮಾತನಾಡಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.