ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಎಫ್‍ಐಆರ್ ದಾಖಲಾಗಿದೆ.
ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ 306 ಆತ್ಮಹತ್ಯೆಗೆ ಪ್ರಚೋದನೆ ಯಡಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಈಶ್ವರಪ್ಪ ವಿರುದ್ಧ ಸಂತೋಷ್ ಸಹೋದರ ಪ್ರಶಾಂತ್ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ಸಂತೋಷ್ ಸಾವಿಗೆ ಕಮಿಷನ್ ಕಾಟವೇ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಸಂತೋಷ್ ಅವರು ಹಿಂಡಲಗಾ ದೇವಿ ಜಾತ್ರೆ ಕಾಮಗಾರಿ ವಹಿಸಿಕೊಂಡಿದ್ದರು. ಕಾಮಗಾರಿಯ 4 ಕೋಟಿ ಬಿಲ್ ಮಂಜೂರು ಮಾಡಲು ಸಂತೋಷ್ ಕೋರಿದ್ದರು.
ಆದರೆ ಈ ಬಿಲ್ ಮಂಜೂರು ಮಾಡಲು ಸಂಬಂಧಪಟ್ಟವರು ಶೇ. 40 ಕಮಿಷನ್ ಬೇಡಿಕೆಯಿಟ್ಟಿದ್ದರು.
ಇದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಸಂತೋಷ್ ಸಹೋದರ ಉಲ್ಲೇಖಿಸಿದ್ದಾರೆ.

