ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಾವಧಯಲ್ಲಿ ಇಂತಹ ಅನೇಕ ಪ್ರಕರಣಗಳು ನಡೆದಿವೆ. ಕೊಲೆ ಪ್ರಕರಣಗಳನ್ನೇ ಹಿಂಪಡೆದಿರುವ ಅವರಿಗೆ ಈಗ ಪ್ರತಿಭಟನೆ ನಡೆಸುವ ನೈತಿಕತೆ ಇದೆಯೆ ಎಂದು ಪ್ರಶ್ನಿಸಿದರು.
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಹೋರಾಟ ನಡೆಸುವ ನೈತಿಕತೆ ಕಾಂಗ್ರೆಸ್ ನವರಿಗಿಲ್ಲ. ಹಿಂದೆ ಅವರ ಅವಧಿಯಲ್ಲೇ ಅನೇಕ ಕೊಲೆಗಳಾಗಿವೆ. ಕೊಲೆ ಮಾಡಿದವರ ಪ್ರಕರಣಗಳನ್ನೇ ಹಿಂಪಡೆದಿರುವ ಕುಖ್ಯಾತಿ ಆ ಪಕ್ಷದ್ದು ಎಂದು ಆರೋಪಿಸಿದರು.
ರಾಜ್ಯದಲ್ಲಿ ಇಂತಹ ಅರಾಜಕತೆ ಸೃಷ್ಟಿಸಿ, ಮಾಡಬಾರದ್ದನ್ನೆಲ್ಲ ಮಾಡಿದ್ದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ.
ಬಿಜೆಪಿ ವಿರುದ್ಧವಾಗಲಿ, ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡುವ ನೈತಿಕತೆಯನ್ನು ಅವರು ಉಳಿಸಿಕೊಂಡಿಲ್ಲ. ಇದು ರಾಜಕೀಯ ಲಾಭಕ್ಕಾಗಿ ನಡೆಸುತ್ತಿರುವ ಹೋರಾಟ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಕಚೇರಿಯಲ್ಲೇ ಲಂಚ ಪಡೆಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರ ಅದಿಕಾರ ಇದ್ದಾಗ ಬಿಡಿಎ ಸೇರಿದಂತೆ ಅನೇಕ ಇಲಾಖೆಗಳಲ್ಲಿ ಹಗರಣ ನಡೆದಿರುವುದಕ್ಕೆ ಸಾಕ್ಷಿಗಳಿವೆ. ಅವರಿಗೆ ಯಾವ ನೈತಿಕತೆ ಇದೆ ಎಂದು ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು.
ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಮುಕ್ತ ಮತ್ತು ಪಾರದರ್ಶಕತೆಯಿಂದ ತನಿಖೆ ನಡೆಸಲಿದೆ. ಪ್ರಾಥಮಿಕ ವರದಿ ಬಂದ ನಂತರ ಯಾವ ಸಂಸ್ಥೆಯಿಂದ ತನಿಖೆ ನಡೆಸಬೇಕೆಂಬುದನ್ನು ತೀರ್ಮಾನಿಸಲಾಗುತ್ತದೆ ಎಂದು ಹೇಳಿದರು.
ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲ. ವರದಿ ಬಂದ ನಂತರ ಸಚಿವ ಈಶ್ವರಪ್ಪನವರ ರಾಜೀನಾಮೆ ಕುರಿತು ತೀರ್ಮಾನವಾಗಲಿದೆ ಎಂದು ತಿಳಿಸಿದರು.
ಪ್ರಾಥಮಿಕ ತನಿಖೆಯಾಗುವವರೆಗೂ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈವರೆಗೂ ಈಶ್ವರಪ್ಪನವರ ವಿಷಯದಲ್ಲಿ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂಬ ಆರೋಪ ಕುರಿತು ಯಾರ ಬಳಿಯಾದರೂ ದಾಖಲೆಗಳಿದ್ದರೆ ಕೊಡಿ. ಸರ್ಕಾರ ಖಂಡಿತವಾಗಿಯೂ ತನಿಖೆ ನಡೆಸಲಿದೆ ಎಂದು ಬೊಮ್ಮಾಯಿ ಭರವಸೆ ನೀಡಿದರು.
ಜಿಲ್ಲಾಡಳಿತ ಕಚೇರಿಯಿಂದ ಶಿಷ್ಠಾಚಾರ ಉಲ್ಲಂಘನೆ: ಸಾರ್ವಜನಿಕ ವಲಯದಲ್ಲಿ ಅಸಮಾಧಾನ
ಚಾಮರಾಜನಗರ: ಚಾಮರಾಜ ನಗರ ಜಿಲ್ಲಾಡಳಿತ ಕಚೇರಿಯಿಂದ ಶಿಷ್ಠಾಚಾರ ಉಲ್ಲಂಘನೆಯಾಗಿದ್ದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.

