ಶಿವಮೊಗ್ಗ: ಸಚಿವ ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ. ಅನಿವಾರ್ಯವಾಗಿ ಅವರೇ ಕಾನೂನಿಗೆ ತಲೆಬಾಗಿ ರಾಜೀನಾಮೆ ಕೊಟ್ಟಿದ್ದಾರೆ. ಮತ್ತೊಮ್ಮೆ ಅವರು ಸಚಿವರಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಸ್ವಯಂಪ್ರೇರಿತರಾಗಿ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಟ್ಟಿದ್ದಾರೆ ಅವರು ಆರೋಪ ಮುಕ್ತರಾಗಿ ಹೊರಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತನಿಖೆಗೆ ಸಹಾಯವಾಗಲಿ ಎಂದು ಸಚಿವ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ರಾಜೀನಾಮೆ ನೀಡಬೇಕೆಂದು ಅವರ ಮೇಲೆ ಯಾವ ಒತ್ತಡವೂ ಇರಲಿಲ್ಲ. ಹಿರಿಯರು ಕೂಡ ಸಲಹೆಯನ್ನು ನೀಡಿರಲಿಲ್ಲ ಎಂದು ತಿಳಿಸಿದರು.
ಎರಡು ಮೂರು ತಿಂಗಳಲ್ಲಿ ತನಿಖೆ ಮುಗಿದು ಸತ್ಯಾಂಶ ಹೊರ ಬರಬೇಕು. ಈ ಎಲ್ಲಾ ಬೆಳವಣಿಗೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಾಗುವುದಿಲ್ಲ ಎಂದು ಬಿ ಎಸ್ ವೈ ಹೇಳಿದರು.

