ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಅತ್ಯಂತ ಕಠಿಣ ಕ್ರಮ -ಗೃಹ ಸಚಿವ

ಹೊಸಪೇಟೆ: ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸುವವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಹೇಳಿದ್ದಾರೆ.

ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ವಿವಾದಿತ ಸ್ಟೇಟಸ್‍ ಪೋಸ್ಟ್ ಮಾಡಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಹಿಂಸಾಚಾರ ಘಟನೆ ಅತ್ಯಂತ ಖಂಡನೀಯ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಹಳೇ ಹುಬ್ಬಳ್ಳಿಯಲ್ಲಿನ ದಾಂಧಲೆ ಪ್ರಕರಣವು ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ರೀತಿಯಲ್ಲಿ ಆಗಿದ್ದು, ಘಟನೆ ಹದ್ದುಬಸ್ತಿಗೆ ತರಲು ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಗಲಭೆ ಕುರಿತು ಸಂದೇಶ ಪೋಸ್ಟ್ ಮಾಡಿದವನೂ ಸೇರಿದಂತೆ 25ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಎಂದು ಹೇಳಿದರು.

ಕಾನೂನು ಕೈಗೆತ್ತಿಕೊಳ್ಳುವವರು ಯಾವುದೇ ಧರ್ಮದವರಾದರೂ ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಇದೊಂದು ವ್ಯವಸ್ಥಿತ ಸಂಚು ಇದ್ದಂತೆ ಮೇಲ್ನೋಟಕ್ಕೆ ಕಾಣುತ್ತದೆ. ನನಗೆ ಬಂದ ಮಾಹಿತಿ ಪ್ರಕಾರ ಅಲ್ಲಿ ಮೊದಲೇ ಒಂದು ಲೋಡ್ ಕಲ್ಲು ಸಂಗ್ರಹವಾಗಿತ್ತು.ಕಲ್ಲು ತೂರಾಟದ ವೇಳೆ ಕೆಲ ಪೊಲೀಸ್ ಗಾಯಗೊಂಡಿದ್ದಾರೆ. ಒಬ್ಬರು ಪಿಎಸ್‌ಐ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ಮಾಹಿತಿ ನೀಡಿದರು.