ಕಾಂಗ್ರೆಸ್ ನಾಯಕರ ವಿರುದ್ಧ ಎಫ್.ಐ.ಆರ್

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್.ಈಶ್ವರಪ್ಪನವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಲ್ಲದೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು ಹಾಗಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.

ಎ-1 ಸಿದ್ದರಾಮಯ್ಯ, ಎ-2 ಡಿ.ಕೆ.ಶಿವಕುಮಾರ್, ಎ-3 ರಣ್ ದೀಪ್ ಸುರ್ಜೇವಾಲ ಸೇರಿ 36 ಮಂದಿ ವಿರುದ್ಧ ಎಫ್.ಐ.ಆರ್ ಹಾಕಲಾಗಿದೆ.

ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿ  ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.