ಕರ್ನಾಟಕಕ್ಕೆ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅಗತ್ಯ; ಆರಗ ವಿರುದ್ಧ ಯತ್ನಾಳ್ ಬಾಂಬ್

ವಿಜಯಪುರ: ಕರ್ನಾಟಕದಲ್ಲಿ ಈಗಿರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್  ಅವಶ್ಯಕತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಹುಬ್ಬಳ್ಳಿಯ ಗಲಭೆ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,

ಕರ್ನಾಟಕದಲ್ಲಿ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು ಆರಗ ಜ್ಞಾನೇಂದ್ರ ‌ಅವರನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿನ ಇತ್ತೀಚಿನ ಗಲಭೆಗಳ ಬಗ್ಗೆ  ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಾಫ್ಟ್ ಕಾರ್ನರ್ ಆಗಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟ ಸ್ಥಳಗಳಲ್ಲಿ ಹಿಂಸಾಚಾರ ನಡೆಯುತ್ತಿದೆ ಹೀಗಾಗಿ ರಾಜ್ಯಕ್ಕೆ ಬಲಿಷ್ಠ ಗೃಹ ಸಚಿವರ ಅವಶ್ಯಕತೆ ಇದೆ ಎಂದು ಯತ್ನಾಳ್ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಯತ್ನಾಳ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಲಿ ಇರುವ ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು.

ಏಪ್ರಿಲ್ ಕೊನೆಯ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.