ವರಿಷ್ಠರು ಒಪ್ಪಿಗೆ ಕೊಟ್ಟಾಗ ಸಂಪುಟ ವಿಸ್ತರಣೆ; ರಾಜ್ಯದ ಅಭಿವೃದ್ಧಿಯೇ ನನಗೆ ಮುಖ್ಯ -ಬೊಮ್ಮಾಯಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ವರಿಷ್ಠರು ಒಪ್ಪಿಗೆ ಕೊಟ್ಟಾಗ ಆಗುತ್ತದೆ. ಮೊದಲು ರಾಜ್ಯದ ಅಭಿವೃದ್ಧಿ ಕಡೆ ಹೆಚ್ಚು ಗಮನಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ವರಿಷ್ಠರು ಕರೆದಾಗ ದೆಹಲಿಗೆ ಹೋಗಿ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.

ವರಿಷ್ಠರು ಯಾವ ದಿನ ಬರಬೇಕು ಎಂಬುದರ ಬಗ್ಗೆ ಇನ್ನೂ ಸೂಚನೆ ಕೊಟ್ಟಿಲ್ಲ. ಹೋಗುವಾಗ ಮಾಧ್ಯಮಗಳಿಗೆ  ಮಾಹಿತಿ ನೀಡಿಯೇ ಹೋಗುತ್ತದೆ ಎಂದು ತಿಳಿಸಿದರು.

ಕರ್ನಾಟಕವನ್ನು ಎಲ್ಲಾ ಕ್ಷೇತ್ರಗಳಲ್ಲೂ ಮೊದಲ ಸ್ಥಾನಕ್ಕೆ ಕೊಡಯ್ಯಬೇಕು ಎಂಬುದು ನಮ್ಮ ಸರ್ಕಾರದ ಹೆಗ್ಗುರಿಯಾಗಿದೆ ಎಂದು ಹೇಳಿದರು.

ಹಲವಾರು ಅಭಿವೃದ್ಧಿ ಜೊತೆಗೆ ಪಕ್ಷಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವಿದೆ. ಕಾರಜೋಳ ಮತ್ತು ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ನೀರಾವರಿಗೆ ಸಂಬಂಧಿಸಿದಂತೆ ಇರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೇನೆ ಎಂದು ಸಿಎಂ ತಿಳಿಸಿದರು.

ಹುಬ್ಬಳ್ಳಿ ಗಲಭೆ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡುತ್ತೇವೆ. ಕಾನೂನು ಕೈಗೆ ತೆಗೊಂಡರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದು ಅಕ್ಷಮ್ಯ ಅಪರಾಧ. ಅಂಥವರ ಮೇಲೆ  ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದರು.