ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ ಏಜೆಂಟ್ -ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕನಪುರದವರಾಗಿದ್ದು ಅವರು ಕಾಂಗ್ರೆಸ್ ಪಕ್ಷದ ಏಜೆಂಟ್ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,

ಕೆಂಪಣ್ಣ ಕಾಂಗ್ರೆಸ್‍ ಪಕ್ಷದ ದಾಸ ಎಂದು ಕಿಡಿಕಾರಿದರು.

ಕಾಂಗ್ರೆಸ್  ಜೊತೆ ಸೇರಿ ಸ್ವಾಮೀಜಿ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಮಿಷನ್ ಆರೋಪ ಮಾಡಿದ್ದಾರೆ. ಈ ಆರೋಪವನ್ನು ಸಾಬೀತು ಪಡಿಸಲು ದಾಖಲೆ ಇದ್ದರೆ ಕೊಡಬೇಕೆಂದು ಅವರು ಆಗ್ರಹಿಸಿದರು.

ದಾರಿಯಲ್ಲಿ ಹೋಗುದ ದಾಸರೆಲ್ಲಾ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೋಮು ಗಲಭೆ ಉಂಟು ಮಾಡೋದು ಹಾಗೂ ಸರ್ಕಾರದ ವಿರುದ್ಧ ಪರ್ಸಂಟೇಜ್ ಬಗ್ಗೆ ಆರೋಪ ಮಾಡುವುದನ್ನೇ ಸಿದ್ದರಾಮಯ್ಯಮತ್ತು ಡಿ.ಕೆ.ಶಿವಕುಮಾರ್  ಒಂದು ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಈಶ್ವರಪ್ಪ ಕಿಡಿಕಾರಿದರು.

ಶಾಂತಿ ಇದ್ದ ನಮ್ಮ ರಾಜ್ಯದಲ್ಲಿ ಕೊಲೆ, ಗಲಭೆಯತಂಹ ಹೀನ ಕೃತ್ಯಗಳನ್ನು ಎಸಗಲು ಷಡ್ಯಂತ್ರ ನಡೆಯುತ್ತಿದೆ ಎಂದು ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಮೌಲ್ವಿ ಪ್ರಚೋದನೆ ಮಾಡುವ ವಿಡಿಯೋ ನೋಡಿದ್ದೇನೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡೆದಿರುವುದನ್ನು ನೋಡಿದ್ದೇವೆ. ಇದರಿಂದ ಇಡೀ ಹುಬ್ಬಳ್ಳಿಯಲ್ಲಿ ಅಶಾಂತಿ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆ ಮೌಲ್ವಿ ಹೇಡಿಯಂತೆ ಓಡಿ ಹೋಗಿದ್ದಾಗಿದೆ. ದೇಶದ್ರೋಹ ಮಾಡಿ ಓಡಿ ಹೋಗಿರುವ ರಾಷ್ಟ್ರ ದ್ರೋಹಿ ಮೌಲ್ವಿಯನ್ನು ಬಂಧಿಸುವಂತೆ ಪ್ರಧಾನಿ ಹಾಗೂ ಅಮಿತ್ ಶಾ ಅವರಲ್ಲಿ ಒತ್ತಾಯಿಸುತ್ತೇನೆ ಎಂದು‌ ಈಶ್ವರಪ್ಪ ತಿಳಿಸಿದರು.