ಮುಂದಿನ ಚುನಾವಣೆ ನಂತರ ಕಾಂಗ್ರೆಸ್ ಉಸಿರು ನಿಲ್ಲಲಿದೆ -ಬಿ ಎಸ್ ವೈ ಟೀಕೆ

ದೇವನಹಳ್ಳಿ: ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಕರ್ನಾಟಕದಲ್ಲಿ ಸ್ವಲ್ಪ ಉಸಿರಾಡುತ್ತಿದೆ, ಮುಂದಿನ ಚುನಾವಣೆ ನಂತರ ಇದೂ ಸಹ ಕೊನೆಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ನಾಯಕತ್ವ ಇಲ್ಲದೆ ಮುಳುಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಇಡೀ ವಿಶ್ವವೇ ಮೆಚ್ಚುವಂತೆ ನರೇಂದ್ರ ಮೋದಿ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ಕೆಲಸಗಳನ್ನು ರಾಜ್ಯದ ಮನೆ ಮನೆಗೆ ತಲುಪಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.