ಮುಂದಿನ ಚುನಾವಣೆಗೆ ಸರ್ವೆ ಮಾಡಿಯೇ ಟಿಕೆಟ್ -ಕಟೀಲ್

ಹುಬ್ಬಳ್ಳಿ:  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸರ್ವೆ ಮಾಡಿಯೇ ಟಿಕೆಟ್‌ ನೀಡಲಾಗುವುದು ಎಂದು ಬಿಜೆಪಿ ರಾಜ್ಯಧ್ಯ ಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಹಾವೇರಿ ಹಾಗೂ ಗದಗ ಜಿಲ್ಲೆಗಳ ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲ್ಲಬೇಕೆನ್ನುವ ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದರು.

ಚುನಾವಣೆಗೆ ಇನ್ನೂ ಹಲವು ತಿಂಗಳು ಬಾಕಿ ಇರುವಾಗಲೇ ತಯಾರಿ ಆರಂಭಿಸಿದ್ದೇವೆ.  ಬೂತ್‌ ಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ಹೇಳಿದರು.

ಪಕ್ಷ ಸಂಘಟನೆ ವಿಷಯದಲ್ಲಿ ನಿಷ್ಕ್ರಿಯವಾಗಿರುವವರನ್ನು ಕೈ ಬಿಟ್ಟು ಹೊಸಬರನ್ನು ನೇಮಿಸಬೇಕು. ಹಾನಗಲ್‌ ಕ್ಷೇತ್ರದಲ್ಲಿ ಸಂಘಟನೆಗೆ ವಿಶೇಷ ಆದ್ಯತೆ ಕೊಡಬೇಕೆಂದು ಅವರು ಸೂಚಿಸಿದ್ದಾರೆ.