ನವದೆಹಲಿ: ದೇಶದಲ್ಲಿ ಕೊರೊನಾ ಅಲೆ ನಮ್ಮನ್ನು ಸಂಪೂಣವಾಗಿ ಬಿಟ್ಟು ಹೋಗಿಲ್ಲ, ಪರಿಸ್ಥಿತಿ ಹದಗೆಟ್ಟಿಲ್ಲ,ಆದರೂ ನಿರ್ಲಕ್ಷ್ಯವಹಿಸದೆ ಕೆಲ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಿದ ಮೋದಿ ಅವರು ಕೆಲ ಸಲಹೆಗಳನ್ನು ನೀಡಿದ್ದಾರೆ.
ಈ ಹಿಂದಿನಂತೆ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‍ಮೆಂಟ್ ತಂತ್ರವನ್ನು ಎಲ್ಲಾ ರಾಜ್ಯಗಳು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಈ ಹಿಂದೆ 1, 2 ಮತ್ತು 3ನೇ ಕೋವಿಡ್ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಓಮಿಕ್ರಾನ್ ಎದುರಿಸಿರುವ ನಮಗೆ 4ನೇ ಅಲೆ ದೊಡ್ಡ ಸಮಸ್ಯೆಯಾಗಲಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಒಂದನೇ ಲಸಿಕೆಯನ್ನು ಬಹುತೇಕ ಎಲ್ಲರೂ ಪಡೆದಿದ್ದಾರೆ. ಕೆಲವರು 2ನೇ ಲಸಿಕೆ ಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಇಂಥವರನ್ನುಗುರುತಿಸಿ ಲಸಿಕೆ ನೀಡಬೇಕೆಂದು ಸಲಹೆ ಮಾಡಿದರು.
60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡುತ್ತಿದ್ದೇವೆ. ಕೆಲವರು ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಕೋವಿಡ್ ಹೋಗಿರುವಾಗ ನಮಗೇಕೆ ಎಂದು ಕೆಲವರು ಉದಾಸೀನ ತೋರುತ್ತಿದ್ದಾರೆ.ಅಂತರವನ್ನು ಗುರುತಿಸಿ ಲಸಿಕೆ ಹಾಕಿಸಿ ಎಂದು ಪ್ರಧಾನಿಯವರು ಹೇಳಿದರು.
ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಪ್ರತಿ ನಿಯಮಗಳನ್ನು ಪಾಲನೆ ಮಾಡಬೇಕೆಂದು ಮನವಿ ಮಾಡಿದರು. ಕೆಲವು ಕಡೆ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆಯೇ ರಕ್ಷಾ ಕವಚ ಎಂಬುದನ್ನು ಮರೆಯಬಾರದು ಎಂದು ಜನತೆಗೆ ಕಿವಿಮಾತು ಹೇಳಿದರು.

