ಸುದೀಪ್ ಹೇಳಿರುವುದು ಸರಿಯಾಗಿದೆ -ಸಿಎಂ

ಹುಬ್ಬಳ್ಳಿ: ಹಿಂದಿ ಭಾಷೆ ಹೇರಿಕೆ ವಿಚಾರ ಕುರಿತು ನಟ ಸುದೀಪ್ ಹೇಳಿರುವುದು ಸರಿಯಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯ  ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಅವರು ಮಾತನಾಡಿದರು.

ಭಾಷಾವಾರು, ಪ್ರಾಂತ್ಯವಾರು ಆದಮೇಲೆ ಎಲ್ಲವೂ ಮಾತೃಭಾಷೆ ಆಗಿದ್ದು ನಮ್ಮ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದೆ ಎಂದು ಸ್ಪಷ್ಟಪಡಿಸಿದರು.

ಕೋವಿಡ್ 4 ನೆಯ ಅಲೆ ಕುರಿತು ಪ್ರತಿಕ್ರಿಯಿಸಿದ ಅವರು ಕೊರೊನ ಪರೀಕ್ಷೆ ಗಳನ್ನ ಜಾಸ್ತಿ ಮಾಡುತ್ತೇವೆ. ಜೊತೆಗೆ

ಸಾರಿ ,ಐ ಎಲ್ ಐ ಟೆಸ್ಟ್ ಮಾಡಿದರೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಮಾಡಿದ್ದೇವೆ ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

4ನೆಯ ಅಲೆ ಬಂದಿಲ್ಲ‌ ಆದರೂ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ.ಈಗಾಗಲೇ 6 ವರ್ಷದಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಕೊಡೋ ನಿರ್ಧಾರ ಆಗಿದೆ ಇದಕ್ಕೆ ಪಾಲಕರು ಹಾಗೂ ಸಂಘ ಸಂಸ್ಥೆಗಳವರು ಸಹ ಸಹಕಾರ ನೀಡಬೇಕು ಎಂದು ಸಿಎಂ ಮನವಿ ಮಾಡಿದರು.