ಮೈಸೂರು: ಜೆಎಸ್‍ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ 4ನೇ ಘಟಿಕೋತ್ಸವ ಸಮಾರಂಭ ಇದೇ ಮೇ 2ರಂದು ನಡೆಯಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಜೆಎಸ್‍ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಪರೀಕ್ಷಾ ನಿಯಂತ್ರಣಾಧಿಕಾರಿ ಡಾ ಎ ಎನ್ ಸಂತೋಷ್ ಕುಮಾರ್ ಮಾಹಿತಿ ನೀಡಿದರು.
ಜೆಎಸ್‍ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಅಂದು ಬೆಳಗ್ಗೆ ಬೆಳಿಗ್ಗೆ 10.30ಕ್ಕೆ ಸಮಾರಂಭ ನಡೆಯಲಿದ್ದು, ಶ್ರೀ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಘಟಿಕೋತ್ಸವ ಸಮಾರಂಭದಲ್ಲಿ ದೆಹಲಿಯ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಅಧ್ಯಕ್ಷ ಪೆÇ್ರ. ಅನಿಲ್ ಡಿ ಸಹಸ್ರಬುದ್ಧೆ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಮಾರಂಭದಲ್ಲಿ ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಸಿ. ಜಿ. ಬೆಟಸೂರ್ ಮಠ, ತಾಂತ್ರಿಕ ಶಿಕ್ಷಣ ವಿಭಾಗದ ಪೆÇ್ರ. ಎಂ. ಎಚ್. ಧನಂಜಯ, ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಬಿ. ಸುರೇಶ್ ಇನ್ನಿತರರು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.
ಘಟಿಕೋತ್ಸವದಲ್ಲಿ ಒಟ್ಟು 1,519 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳ ಪ್ರದಾನ ಮಾಡಲಾಗುವುದು. ಘಟಿಕೋತ್ಸವದಲ್ಲಿ 53 ವಿದ್ಯಾರ್ಥಿಗಳು ಪದಕ ಪಡೆಯಲಿದ್ದು, ಇವರಲ್ಲಿ 33 ಮಂದಿ ರ್ಯಾಂಕ್ ವಿಜೇತರಿದ್ದಾರೆ. ಇದಲ್ಲದೆ 20 ವಿದ್ಯಾರ್ಥಿಗಳಿಗೆ ದತ್ತಿ ಬಹುಮಾನ ನೀಡಲಾಗುವುದು. 997 ಬಿಇ, 28 ಬಿಸಿಎ, 199 ಎಂಟೆಕ್, 57 ಎಂಸಿಎ, 33 ಎಂಎಸ್ಸಿ, 200 ಎಂಬಿಎ, ಹಾಗೂ ಪಿಹೆಚ್ ಅಭ್ಯರ್ಥಿಗಳು ಪದವಿ ಪ್ರಮಾಣ ಪತ್ರ ಪಡೆಯುವರು ಎಂದು ಪೆÇ್ರ. ಸಂತೋಷ್ ಕುಮಾರ್ ಹೇಳಿದರು.

