ಬೊಮ್ಮಯಿ ಜನತಾ ಪರಿವಾರದವ ಆದರೆ ನಮ್ಮ ಪಟ್ಟು ಕಲಿಯಲಿಲ್ಲ -ಸಿದ್ದು

ಮೈಸೂರು: ಬಸವರಾಜ ಬೊಮ್ಮಯಿ ಆರ್ ಎಸ್ ಎಸ್ ನವನಲ್ಲ,
ಅದಕ್ಕಾಗಿ ಅವರನ್ನು ಬದಲಾಯಿಸಲು  ಹೋರಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,
ಬೊಮ್ಮಯಿ ಜನತಾ ಪರಿವಾರದವನು,
ನಮ್ಮ ಜೊತೆಯಲ್ಲೇ ಇದ್ದ,
ಆದರೆ ಅವನು ನಮ್ಮ ಪಟ್ಟುಗಳನ್ನು ಕಲಿಯಲಿಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಸತ್ತು ಹೋಗಿದೆ.
ಮುಖ್ಯ ಮಂತ್ರಿ ಹಾಗೂ ಗೃಹ ಸಚಿವರು ಅಶಕ್ತರು ಎಂದು ಟೀಕಿಸಿದರು.

ಆರಗ ಜ್ಞಾನೇಂದ್ರ ಅತ್ಯಂತ ಅಸಮರ್ಥ ಗೃಹ ಸಚಿವ,ರಾಜ್ಯದಲ್ಲಿ ಬಿಜೆಪಿಯವರಿಗೆ ಆಡಳಿತ ಮಾಡುವುದಕ್ಕೆ ಬರುತ್ತಿಲ್ಲ.
ಎಲ್ಲಾ ಪರೀಕ್ಷೆಗಳಲ್ಲೂ ದುಡ್ಡು ದುಡ್ಡು ಎನ್ನುತ್ತಿದ್ದಾರೆ ದುಡ್ಡು ಕೊಟ್ಟು ಬಂದ ಅಧಿಕಾರಿಗಳು ಇವರ ಮಾತು ಕೇಳುತ್ತಿಲ್ಲ ಎಂದು ಎಂದು ಸಿದ್ದು ಗೇಲಿ ಮಾಡಿದರು.

ಕಾಂಗ್ರೆಸ್‌ನಿಂದ ವಂಶ ಪಾರಂಪರ್ಯ ರಾಜಕಾರಣ ಎಂಬ
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಯಡಿಯೂರಪ್ಪ ಮತ್ತು ಅವರ ಮಕ್ಕಳು ಯಾರು ಅಪ್ಪ- ಮಕ್ಕಳಲ್ವ 
ವಂಶ ಪಾರಂಪರ್ಯ ರಾಜಕಾರಣದ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ
ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯದಲ್ಲಿ ಕಲ್ಲಿದ್ದಲ ಕೊರತೆ ಇಲ್ಲ.
ಆದರೆ ಸರ್ಕಾರಕ್ಕೆ ಅದನ್ನು ನಿಭಾಯಿಸಲು ಬರುತ್ತಿಲ್ಲ,ಕಲ್ಲಿದ್ದಲು ಹೆಚ್ಚಾಗಿಯೇ ಇದೆ,
ಆದರೆ ಅದನ್ನು ಹಂಚಿಕೆ ಮಾಡಲು ಇವರಿಗೆ ಬರುತ್ತಿಲ್ಲ ಎಂದು ಸಿದ್ದು ಟೀಕಾಪ್ರಹಾರ ನಡೆಸಿದರು.