ಮೇ 10 ರೊಳಗೆ ಸಿಎಂ ಬದಲಾವಣೆ -ಯತ್ನಾಳ್ ಬಾಂಬ್

ವಿಜಯಪುರ : ಮೇ 10 ರೊಳಗೆ ಮುಖ್ಯ ಮಂತ್ರಿ ಬದಲಾವಣೆ ಆಗಬಹುದು ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿ ಸಂಚಲನ ಮೂಡಿಸಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಅಮಿತ್ ಷಾ ರಾಜ್ಯಕ್ಕೆ ಆಗಮಿಸಿದ್ದಾರೆ. ರಾಜ್ಯ ಹಾಗೂ ಪಾರ್ಟಿ ಹಿತದೃಷ್ಟಿಯಿಂದ ಪಕ್ಷ ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಸೋಮವಾರ ದೆಹಲಿಯಲ್ಲಿ ಹೈ ಪವರ್ ಸಭೆ ನಡೆಸಲಾಗಿದೆ. ಅಂತಿಮ ತೀರ್ಮಾನವನ್ನು ಪ್ರಧಾನಿ ಮೋದಿ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು ಸಿಎಂ ಬದಲಾವಣೆಯಾದರೆ ಒಬ್ಬರಿಗೆ ಜೈಲಿಗೆ ಹೋಗುವ ಭಯ ಇದೆ. ಇನ್ನೊಬ್ಬರಿಗೆ ಸಿಎಂ ಆಗಲ್ಲ ಎನ್ನುವ ಭಯ ಇದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದರು.

ಬೊಮ್ಮಾಯಿ ಶಾಸಕರಿಗೆ ಸಂಸದರಿಗೆ ಆಯೋಜಿಸಿದ ಔತಣಕೂಟದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೂ ಸಿಎಂ ಕಚೇರಿಯಿಂದ ಕರೆ ಮಾಡಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು

ಆದರೆ ಬಸವ ಜಯಂತಿಯ ಈ ಪವಿತ್ರ ದಿನದಂದು ವಿಜಯಪುರದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೀಗಾಗಿ ನಾನು ಬೆಂಗಳೂರಿಗೆ ತೆರಳುತ್ತಿಲ್ಲ ಎಂದು ಯತ್ನಾಳ್ ಸ್ಪಷ್ಟಪಡಿಸಿದರು.