ವಿಜಯನಗರ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.
ವಿಜಯನಗರದಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ನಾಯಕತ್ವ ಬದಲಾವಣೆಯಾಗುವುದಿಲ್ಲ ಎಂದು ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪಿಎಸ್‍ಎ ನೇಮಕದಲ್ಲಿ ಅಕ್ರಮ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಆರೋಪಿಗಳನ್ನ ಬಂಧಿಸಿದೆ. ಎಷ್ಟೇ ದೊಡ್ಡವರಿದ್ದರೂ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಆಡಳಿತದಲ್ಲೂ ಸಾಕಷ್ಟು ಹಗರಣಗಳು ನಡೆದಿವೆ. ಯಾವುದೇ ಹಗರಣಗಳ ಕುರಿತು ಕಾಂಗ್ರೆಸ್ ತನಿಖೆ ಮಾಡಿಲ್ಲ. ಹೀಗಾಗಿ ಬಿಜೆಪಿ ಕುರಿತು ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಕಟೀಲ್ ತಿರುಗೇಟು ನೀಡಿದರು.

