ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮುಖ್ಯ ಮಂತ್ರಿ ಬದಲಾವಣೆ ಆಗುವುದಿಲ್ಲ,ಆದರೆ ಸಂಪುಟಕ್ಕೆ ಮೇಜರ್ ಸರ್ಜರಿ ಖಂಡಿತಾ ಆಗಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಬೆ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಖಂಡಿತಾ ಆಗುವುದಿಲ್ಲ ಸಿಎಂ ಸ್ಥಾನದಲ್ಲಿ ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.
ಅಮಿತ್ ಷಾ ಅವರು ರಾಜ್ಯಕ್ಕೆ ಬಂದಿರುವುದು ಮುಖ್ಯ ಮಂತ್ರಿ ಬದಲಾವಣೆ ಮಾಡಿವುದಕ್ಕಾಗಿ ಅಲ್ಲ ವಿವಿಧ ಕಾರ್ಯಕ್ರಮ ಗಳಲ್ಲಿ ಪಾಲ್ಗೊಳ್ಳಲು ಅವರು ಆಗಮಿಸಿದ್ದಾರೆ ಅಷ್ಟೇ ಎಂದು ತಿಳಿಸಿದರು.
ನಾನೂ ಕೂಡಾ ಷಾ ಅವರನ್ನ ಭೇಟಿ ಮಾಡಿದೆ,ಆದರೆ ರಾಜ್ಯದ ರಾಜಕೀಯ ಕುರಿತು ಅವರು ಸಮಾಲೋಚನೆ ನಡೆಸಿಲ್ಲ ಎಂದು ಹೇಳಿದರು.
ಮುಖ್ಯ ಮಂತ್ರಿ ಬದಲಾವಣೆ ಅಗಲ್ಲ, ಸಂಪುಟಕ್ಕೆ ಸರ್ಜರಿ ಅಂತೂ ಗ್ಯಾರಂಟಿ ಆಗಲಿದೆ ಎಂದು ಯಡಿಯೂರಪ್ಪ ತಿಳಿಸಿದರು.

