ಬೆಂಗಳೂರು: ರಾಜ್ಯದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವ ಬದಲಾವಣೆ ಎಂಬುದು ಕೇವಲ ಊಹಾಪೋಹ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬೊಮ್ಮಾಯಿ ನಾಯಕತ್ವ ಬದಲಾವಣೆಯಾಗುತ್ತದೆ ಎಂಬ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ ಹೊರತು ವರಿಷ್ಠರು ಈ ಬಗ್ಗೆ ಮಾತುಕತೆ ನಡೆಸಿಲ್ಲ ಎಂದು ತಿಳಿಸಿದರು.
ಜನರ ಅಪೇಕ್ಷೆಗೆ ತಕ್ಕಂತೆ ಬೊಮ್ಮಾಯಿ ಅವರು ಆಡಳಿತ ನಡೆಸುತ್ತಿದ್ದಾರೆ. ಅವರೊಬ್ಬ ಕಾಮನ್ ಮ್ಯಾನ್ ಎಂದು ಬಣ್ಣಿಸಿದರು.
ಜನರ ನಿರೀಕ್ಷೆಗೆ ತಕ್ಕಂತೆ ಬಜೆಟ್ ಮಂಡನೆ ಮಾಡಿ ಅವುಗಳ ಅನುಷ್ಠಾನಕ್ಕೂ ಒತ್ತು ಕೊಟ್ಟಿದ್ದಾರೆ. ಜನರ ಬಯಕೆಯು ಅವರ ನಾಯಕತ್ವ ಬೇಕು ಎನ್ನುತ್ತಿರುವಾಗ ಬದಲಾವಣೆ ಎಂಬುದು ಇಲ್ಲವೇ ಇಲ್ಲ ತಿಳಿಸಿದರು.

