ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಪರಸ್ಪರ ಆರೋಪ, ಪ್ರತ್ಯಾರೋಪ ಮಾಡುವುದನ್ನು ಬಿಟ್ಟು ಯಾರ ಬಳಿ ದಾಖಲೆಗಳಿದೆಯೋ ಅವರು ತನಿಖಾ ತಂಡಕ್ಕೆ ನೀಡಬೇಕೆಂದು ಸೆಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಬರೀ ಆರೋಪ ಮಾಡು ವುದು ಸರಿಯಲ್ಲ. ದಾಖಲೆಗಳಿದ್ದರೆ ಕೊಡಿ ಇದರಿಂದ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.
ಈ ಪ್ರಕರಣದಲ್ಲಿ 300 ಕೋಟಿ ಅವ್ಯವಹಾರ ನಡೆದಿದೆಯೋ ಎಷ್ಟು ಮಂದಿ ಕಿಂಗ್‍ಪಿನ್‍ಗಳಿದ್ದಾರೋ ಎಲ್ಲವೂ ತನಿಖೆಯಿಂದಲೇ ಗೊತ್ತಾಗಬೇಕು. ಸಿಐಡಿಯವರು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ.
ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಲಾಗಿದೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ, ಭ್ರಷ್ಟಾಚಾರದ ಗಂಗೋತ್ರಿ ಎಂದರೆ ಕಾಂಗ್ರೆಸ್ ಪಕ್ಷ ಎಂದು ವ್ಯಂಗ್ಯವಾಡಿದರು.
ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಮಾಡಬಾರದ್ದನ್ನು ಮಾಡಿ ಈಗ ಇನ್ನೊಬ್ಬರ ಬಗ್ಗೆ ಮಾತನಾಡುತ್ತಾರೆ ವಾಗ್ದಾಳಿ ನಡೆಸಿದರು.

