ಶಬ್ದ ಮಾಲಿನ್ಯ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ -ಆರಗ ಜ್ಞಾನೇಂದ್ರ

ಬೆಂಗಳೂರು: ಯಾರೇ ಶಬ್ದಮಾಲಿನ್ಯ ಉಂಟು ಮಾಡಿದರೂ ಅಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಎಲ್ಲರೂ ಗೌರವಿಸಬೇಕು. ನ್ಯಾಯಾಲಯದ ಆದೇಶದಂತೆ ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗುವುದು‌ ಎಂದು ಅವರು ತಿಳಿಸಿದ್ದಾರೆ.

ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಆಜಾನ್ ಮತ್ತು ಸುಪ್ರಭಾತ ಸಂಘರ್ಷ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಯೊಬ್ಬರೂ ಶಬ್ದಮಾಲಿನ್ಯ ತಡೆಗೆ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಹೇಳಿದ್ದಾರೆ.