ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಏನೇನು ಭ್ರಷ್ಟಾಚಾರ ನಡೆದಿತ್ತು ಎಂಬದು ಜಗತ್ತಿಗೆ ಗೊತ್ತಿದೆ ಅದನ್ನು ತಿಳಿದುಕೊಂಡು ಮಾತನಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರು ಗೌರವದಿಂದ ನಡೆದು ಕೊಳ್ಳುವುದನ್ನು ಕಲಿಯಬೇಕು ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
ಯಾರು ದುರ್ಬಲರಿದ್ದರೋ ಯಾರು ಭ್ರಷ್ಟರಿದ್ದರೋ ಅವರ ಬಾಯಲ್ಲಿ ಅದೇ ಮಾತು ಬರುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಇದೇ ವೇಳೆ ಯಡಿಯೂರಪ್ಪ ತಿಳಿಸಿದರು.
ಕೇಂದ್ರದ ನಾಯಕರು ಶೀಘ್ರವೇ ಈ ಕುರಿತು ತೀರ್ಮಾನ ಪ್ರಕಟಿಸಲಿದ್ದಾರೆ ಎಂದರು.
ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಸಂಪುಟಕ್ಕೆ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆಗೆ ನನಗೆ ಗೊತ್ತಿಲ್ಲ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಯಡಿಯೂರಪ್ಪ ಹೇಳಿದರು.
17 ಜನ ಬಿಜೆಪಿಗೆ ಬಂದವರು ಸಚಿವರಾಗಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆಗೆ ನನಗೆ ತಿಳಿತದು ಎಂದು ಉತ್ತರಿಸಿದರು.

