ಮೇ 19ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ

ಬೆಂಗಳೂರು : ಮೇ 19 ರಂದು ಎಸ್ ಎಸ್ ಎಲ್ ಸಿ  ಮಕ್ಕಳ ಭವಿಷ್ಯ ನಿರ್ಣಯವಾಗಲಿದೆ.

ಎಸ್.ಎಸ.ಎಲ್.ಸಿ ಪರೀಕ್ಷಾ ಫಲಿತಾಂಶ ಮೇ. 19 ರಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಎಸ್ ಎಸ್ ಎಲ್ ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಮರುದಿನ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆದಿತ್ತು. ಸುಮಾರು 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಮೂರು ದಿನದ ಹಿಂದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯವಾಗಿದೆ. ಫಲಿತಾಂಶದ ತಯಾರಿ ಮಾಡಲಾಗುತ್ತಿದೆ. ಮೇ ಮೂರನೇ ವಾರ ಫಲಿತಾಂಶ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದ್ದರು. ಅದರಂತೆ ಮೇ.19ರಂದು ಫಲಿತಾಂಶ ಪ್ರಕಟವಾಗಲಿದೆ.