ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿ -ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ  ಬೆಳಿಗ್ಗೆ ದೇವಿಗೆ ಪೂಜೆ ಸಲ್ಲಿಸಿದ ನಂತರ ಅವರು ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದರು.

ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಬೇಕಿದೆ,ಈ‌‌‌ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರೊಡನೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ನಮ್ಮ ಜೆಡಿಎಸ್ ಪಕ್ಷದ ಜನತಾ ಜಲಧಾರೆ ವಾಹನದ ಮೂಲಕ ನಾಡಿನ ನೀರಾವರಿ ಯೋಜನೆ ಹಾಗೂ ಜೆಡಿಎಸ್ ಪಕ್ಷದ ನೀರಾವರಿ ಯೋಜನೆಗಳ ಕನಸ್ಸನ್ನು ರಾಜ್ಯಾದ್ಯಂತ ಜನತೆಗೆ ತಿಳಿಸಲಾಗಿದೆ.

ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈ ತನಕ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದರು.

ಶಾಸಕ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಸಾಥ್ ನೀಡಿದರು.