ಬೆಂಗಳೂರು: ದಪ್ಪವಾಗಿದ್ದೇವೆಂದು ಸಣ್ಣ ಆಗಲು ಸರ್ಜರಿ ಮಾಡಿಸಿಕೊಳ್ಳುವವರಿಗೆ ಎಚ್ಚರಿಕೆ ಗಂಟೆಯನ್ನು ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಕೊಟ್ಟು ಹೋಗಿದ್ದಾರೆ.
ನವರಂಗ್ ವೃತ್ತದ ಬಳಿ ಇರುವ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಟಿ ಚೇತನಾ(21) ಮೃತಪಟ್ಟಿದ್ದಾರೆ.
ಚೇತನಾ ರಾಜ್ ಫ್ಯಾಟ್ ಸರ್ಜರಿ ಮಾಡಿಸಲು ಹೋಗಿ ತಮ್ಮ ಜೀವಕ್ಕೆ ಕುತ್ತು ತಂದು ಕೊಂಡಿದ್ದಾರೆ.
ಬೆಂಗಳೂರಿನ ನವರಂಗ್ ವೃತದ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಚೇತನಾ ಕೊಬ್ಬನ್ನು ಕರಗಿಸಲು ಚಿಕಿತ್ಸೆ ಪಡೆಯುತ್ತಿದ್ದರು. ಶಸ್ತ್ರಚಿಕಿತ್ಸೆ ನಡೆಯುವಾಗಲೇ ನಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರು ತುಂಬಿ ಕೂಡಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಶಸ್ತ್ರಚಿಕಿತ್ಸೆಗೆ ಅಗತ್ಯ ಸಲಕರಣೆ ಹಾಗೂ ಪೋಷಕರ ಅನುಮತಿ ಕೇಳದೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಲು ಹೊರಟಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕಿರುತೆರೆ, ಹಿರಿತೆರೆಯಲ್ಲಿ ಮಿಂಚುತ್ತಿದ್ದ ಮಗಳು ಇನ್ನಿಲ್ಲ ಎಂಬ ಸುದ್ದಿ ತಿಳಿದು ಆಘಾತಕ್ಕೆ ಒಳಗಾಗಿದ್ದಾರೆ. ಮಗಳ ಸಾವಿಗೆ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯ ವೈದ್ಯರು ಕಾರಣ ಎಂದು ಆರೋಪಿಸಿದ್ದಾರೆ.
ನಟಿ ಚೇತನಾ ರಾಜ್ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಕಲರ್ಸ್ ಕನ್ನಡದಲ್ಲಿ ಬರುತ್ತಿರುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಎಂಬ ಧಾರಾವಾಹಿಯಲ್ಲಿ ನಟಿಸಿದ್ದರು.
ಅಲ್ಲದೆ ಇನ್ನೂ ತೆರೆ ಕಾಣದ ಹವಾಯಾಮಿ ಎಂಬ ಹೊಸ ಸಿನಿಮಾದಲ್ಲೂ ನಟನೆ ಮಾಡಿದ್ದರು.
ಚೇತನಾ ಅಗಲಿದಿರುವುದಕ್ಕೆ ಚಿತ್ರರಂಗ ಮತ್ತು ಕಿರುತೆರೆಯ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.

