ಬೆಂಗಳೂರಿನಲ್ಲಿ ಭಾರಿ ಮಳೆ: ತುರ್ತು ಕಾರ್ಯ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೆಲವು ಕಡೆ ವ್ಯಾಪಕ ಹಾನಿಯಾಗಿದ್ದು, ತಕ್ಷಣವೇ ತುರ್ತು ಪರಿಹಾರವನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮ ಪಕ್ಷ ನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಕೆಲವು ಕಡೆ 100ಮಿಲಿಮೀಟರ್ ಹಾಗೂ ಇನ್ನೂ ಕೆಲವು ಕಡೆ 99ಮಿಲಿಮೀಟರ್ ಮಳೆಯಾಗಿದೆ. ಎಲ್ಲೆ ಹೆಚ್ಚಿನ ಹಾನಿಯಾಗಿದೆಯೋ ಅಂತಹ ಕಡೆ ಪರಿಹಾರ ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ನೀರು ಸರಿಯಾಗಿ ಚರಂಡಿಗೆ ಹೋಗದ ಕಾರಣ ಕೆಲವು ಪ್ರದೇಶಗಳಲ್ಲಿ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ.  ಅನಾಹುತವಾಗಿರುವ‌ ಕಡೆ  ತಕ್ಷಣ ಪರಿಹಾರ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ತಗ್ಗು ಪ್ರದೇಶಗಳ ಕಡೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ ಹೇಳಿದರು.

ಬೆಂಗಳೂರಿನಲ್ಕಿ ಕೈಗೊಂಡಿರುವ ಕಾಮಗಾರಿಗಳನ್ನು ತತ್‍ಕ್ಷಣವೇ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚನೆಕೊಟ್ಟಿದ್ದೇನೆ. ಕಾಲುವೆಯಲ್ಲಿ ಹೂಳೆತ್ತುವುದು.

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಾಗಾಗಿ‌ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಎಲ್ಲೆಲ್ಲಿ ಮಳೆಯಿಂದ ಅನಾಹುತವಾಗಿದೆಯೋ ಅಂತಹ ಕಡೆ ಪರಿಹಾರ ಕಾರ್ಯ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.