ರಾಯಚೂರು: ಮೂರು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಕಮಿಷನ್ ವಿಚಾರಕ್ಕೆ ಕಾಂಗ್ರೆಸ್- ಬಿಜೆಪಿ ಮಧ್ಯೆ ಜಗಳ ಉಂಟಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಚಿಕ್ಕಪ್ಪ- ದೊಡ್ಡಪ್ಪನ ಮಕ್ಕಳು. ಜೆಡಿಎಸ್ ಪರಿಚಯ ಮಾಡುವ ಅಗತ್ಯವಿಲ್ಲ ಎಂದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವೇ ನಂಬರ್ ಒನ್, ಬಿಜೆಪಿ ಸೆಕೆಂಡ್, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗುತ್ತದೆ. ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತದೆ ಎಂದು ಇಬ್ರಾಹಿಂ ಹೇಳಿದರು.

