ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ 15ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಹಲವಾರು ವರ್ಷದಿಂದ ವಿವಿಧ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ವಿವಿಧ ಕ್ಷೇತ್ರದ ಸಾಧಕರಿಗೆ ಮೈಸೂರಿನ ಸಾಮಾಜಿಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೈಸೂರಿನ ಎಂ ಜಿ ರಸ್ತೆಯಲ್ಲಿರುವ ಸಿಪಾಯಿ ಗ್ರ್ಯಾಂಡ್ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ಸಾಮಾಜಿಕ ರತ್ನ ಪ್ರಶಸ್ತಿ ಸ್ವೀಕರಿಸಿದ ಡಾ. ಭಾನುಪ್ರಕಾಶ್ ಶರ್ಮಾ-ಧಾರ್ಮಿಕ ಕ್ಷೇತ್ರ, ಮಡ್ಡಿಕೆರೆ ಗೋಪಾಲ್-ಸಾಹಿತ್ಯ ಕ್ಷೇತ್ರ, ಸಿ ನಾರಾಯಣಗೌಡ-ಉದ್ಯಮ ಕ್ಷೇತ್ರ, ಅನಿಲ್ ಕುಮಾರ್-ಪತ್ರಿಕಾರಂಗ ಕ್ಷೇತ್ರ, ದೇವೆಂದ್ರ ಪರಿಹಾರಿಯ-ಸಂಘಟನಾ ಕ್ಷೇತ್ರ, ಶೋಭಾ ದಿನೇಶ್-ಸಾಮಾಜಿಕ ಕ್ಷೇತ್ರ, ಪ್ರಕಾಶ್ ಚಿಕ್ಕಪಾಳ್ಯ-ಕಲಾಕ್ಷೇತ್ರ, ಕೇಬಲ್ ಮಹೇಶ್-ರಾಜಕೀಯ ಕ್ಷೇತ್ರ, ಸುಹಾಸ್-ಕ್ರೀಡಾ ಕ್ಷೇತ್ರ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ನೀಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ ಕೆಎಂಪಿಕೆ ಟ್ರಸ್ಟ್ ಹಲವಾರು ವರ್ಷಗಳಿಂದ ಸಾಮಾಜಿಕ ಸಾಂಸ್ಕೃತಿಕ ಧಾರ್ಮಿಕ ಪರಿಸರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನ ಉತ್ತಮ ರೀತಿಯಲ್ಲಿ ಅಸಯೋಜಿಸಿ ಸಾಕಷ್ಟು ಜನರಿಗೆ ಉಪಯುಕ್ತವಾಗಿದೆ ಎಂದರು.
ಸರ್ಕಾರಿ ಸವಲತ್ತು ಬಡವರ್ಗದವರಿಗೆ ಸಾರ್ವಜನಿಕರಿಗೆ ತಲುಪಬೇಕು ಎಂದರೆ ಸಾಮಾಜಿಕ ಸಂಘ ಸಂಸ್ಥೆಗಳ ಪಾತ್ರ ಮಹತ್ವವಾದುದು. ಹಾಗಾಗಿ ಸಾರ್ವಜನಿಕರು ಸಾಮಾಜಿಕ ಕಳಕಳಿ ಸೇವಾಮನೋಭಾವ ಬೆಳೆಸಿಕೊಳ್ಳುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು.
ಮೈಸೂರಿನಲ್ಲಿ ಎಲೆಮರಿ ಕಾಯಿಯಂತೆ ಸೇವೆ ಸಲ್ಲಿಸಿದ ಸಮಾಜ ಸೇವಕರಿಗೆ ಪ್ರಶಸ್ತಿ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಕಾರ್ಯಗಳು ನಿರಂತರವಾಗಿ ಮುಂದುವರೆಸಿಕೊಂಡು ಬರಲಿ ಎಂದವರು ಹೇಳಿದರು.
ಈ ಸಂದರ್ಭದಲ್ಲಿ ಪರಮಪೂಜ್ಯ ಇಳೈ ಆಳ್ವಾರ್ ಸ್ವಾಮೀಜಿ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್, ಹಿರಿಯ ಸಮಾಜ ಸೇವಕ ಕೆ. ರಘುರಾಂ ವಾಜಪೇಯಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವಲಯ ಉಪಾಧ್ಯಕ್ಷ ನಟರಾಜ್ ಜೋಯಿಸ್, ನಗರ ಪಾಲಿಕಾ ಸದಸ್ಯೆ ಪ್ರಮೀಳಾ ಭರತ್, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ರೇಖಾ ಶ್ರೀನಿವಾಸ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುಡಾ ಸದಸ್ಯೆ ಲಕ್ಷ್ಮೀದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ನಿರ್ದೇಶಕಿ ರೇಣುಕರಾಜ, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ನಗರ ಪಾಲಿಕಾ ಸದಸ್ಯ ಜಗದೀಶ, ಅಪೂರ್ವ ಸುರೇಶ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ರಾಕೇಶ್ ಭಟ್, ಸುಚೇಂದ್ರ, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ರಾಕೇಶ್ ಕುಂಚಿಟಿಗ ಹಾಗೂ ಇನ್ನಿತರರು ಇದ್ದರು.

