ನವದೆಹಲಿ: ಇನ್ನು ಮುಂದೆ ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಕೇಂದ್ರ ಸರ್ಕಾರ ಅಧಿಕೃತವಾಗಿ ಈ ಘೋಷಣೆ ಮಾಡಿರುದರಿಂದ ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರಕ್ಕೆ ಅಡುಗೆ ಅನಿಲವನ್ನು ಖರೀದಿಸಬೇಕಾಗಿದೆ.
ಕೋವಿಡ್ ಪ್ರಾರಂಭವಾದಾಗಿನಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಮುಂದೆಯೂ ನೀಡಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಸಬ್ಸಿಡಿ ನೀಡಲಾಗುತ್ತದೆ ಆದರೆ ದೇಶದ ಎಲ್ಲಾ ಜನರಿಗೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಸದ್ಯ ಮೈಸೂರಿನಲ್ಲಿ 14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್ ಬೆಲೆ 1006 ರೂ. ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂ. ಸಬ್ಸಿಡಿ ಸಿಗಲಿದೆ.

