ಪಠ್ಯದಲ್ಲಿ ಬಸವಣ್ಣನ ನಿಜ ಇತಿಹಾಸದ ಪರಿಚಯ -ಬೊಮ್ಮಾಯಿ

ಚಿತ್ರದುರ್ಗ: ನಮ್ಮದು ಬಸವ ಪಥದ ಸರ್ಕಾರ, ಬಸವಣ್ಣನವರ ವಚನ ಸಾಹಿತ್ಯ ಉತ್ಕೃಷ್ಟವಾದದು. ಮಠಾಧೀಶರು, ಸ್ವಾಮೀಜಿಗಳ ಅಭಿಪ್ರಾಯ ಪಡೆದು ಬಸವಣ್ಣನ ನಿಜ ಇತಿಹಾಸವನ್ನು ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಿರಿಯೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಕಾರ್ಯ ಪೂರ್ಣಗೊಂಡಿರುವುದರಿಂದ ಸಮಿತಿ ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದರು.

ಯಾವುದೇ ಒತ್ತಡದಿಂದ ಈ ನಿರ್ಧಾರ ಕೈಗೊಂಡಿಲ್ಲ. ಹೊಸ ಸಮಿತಿ ರಚಿಸುವ ಪ್ರಮೇಯ ಇಲ್ಲ ಎಂದು ಸ್ಪಷ್ಟ ಪಡಿಸಿದರು.

ನಾಡಿನ ಬೇರೆ ಬೇರೆ ಮಠಾಧೀಶರು ಪತ್ರ ಬರೆದಿದ್ದಾರೆ. 2015 ರಲ್ಲಿ ರಚಿಸಿದ ಪ್ರೋ.ಬರಗೂರು ರಾಮಚಂದ್ರಪ್ಪ ಪರಿಷ್ಕರಣ ಸಮಿತಿ ಹಾಗೂ ಈಗಿನ ಸಮಿತಿ ರಚಿಸಿರುವ ಬಸವಣ್ಣ ಪಠ್ಯದಲ್ಲಿ ಒಂದು ವಾಕ್ಯದ ವ್ಯತ್ಯಾಸವಿದೆ.

ಸಾಣೇಹಳ್ಳಿ ಶ್ರೀಗಳು ಹೇಳಿದ ಲಿಂಗದೀಕ್ಷೇ ವಿಚಾರ ಎರೆಡು ಪಠ್ಯದಲ್ಲೂ ಹೇಳಲಾಗಿದೆ. ಬಸವಣ್ಣ ಪಠ್ಯದಲ್ಲಿ ಸಮಗ್ರ ಬದಲಾವಣೆ ತರಲಾಗುವುದು. ಹೆಗಡೆವಾರ್ ಪಠ್ಯ ಇರುವುದರಲ್ಲಿ ಯಾವುದೇ ತಪ್ಪಿಲ್ಲ.

ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಪರಿಷ್ಕೃತ ಪಠ್ಯದ ಸಂಪುಟ ವಿತರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.