ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ: ಕೇಂದ್ರ,ರಾಜ್ಯ ಪೊಲೀಸರ ಜಂಟಿ ತನಿಖೆ – ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಮಾಡುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ  ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ

ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಂಡಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ  ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದ್ದು, ರಾಜ್ಯ ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ತನಿಖೆಯಲ್ಲಿ ಕೈ ಜೋಡಿಸಿದ್ದಾರೆ ಎಂದು ‌ಹೇಳಿದ್ದಾರೆ.

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆಯ ಹಿಂದಿನ ದುಷ್ಟರು ಯಾರಿದ್ದಾರೆ ಹಾಗೂ ಯಾರ ಜತೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.