ಬೆಂಗಳೂರು: ಬೆಂಗಳೂರು ಗ್ರಾಮಾಂತರ ಪೊಲೀಸರು ಅಕ್ರಮ ಬಾಂಗ್ಲಾದೇಶಿ ನುಸುಳುಕೋರರಿಗೆ, ಆಧಾರ್ ಕಾರ್ಡ್ ಹಾಗೂ ಇನ್ನಿತರ ದಾಖಲೆಗಳನ್ನು ಒದಗಿಸುತ್ತಿದ್ದ ಜಾಲವೊಂದನ್ನು ಭೇದಿಸಿದ್ದು ಗೃಹ ಸಚಿವರು ಅಭಿನಂದಿಸಿದ್ದಾರೆ.
ದಾಖಲೆಗಳನ್ನು ಅಕ್ರಮ ವಲಸಿಗರಿಗೆ ಪೂರೈಸುತ್ತಿದ್ದ ಒಂಬತ್ತು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿಸಲ್ಪಟ್ಟ ಆರೋಪಿಗಳು, ಹಲವು ವರ್ಷಗಳಿಂದ ನಗರದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದರು.
ಈ ಕುರಿತು ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ
ಅಕ್ರಮ ವಲಸಿಗರಿಗೆ ಆಶ್ರಯ ಹಾಗೂ ಇನ್ನಿತರ ಸಹಾಯ ಒದಗಿಸುತ್ತಿದ್ದವರ ವಿರುದ್ಧ ತೀವ್ರ ನಿಗಾ ವಹಿಸಬೇಕು ಮತ್ತು ಅಕ್ರಮ ಚಟುವಟಿಕೆಗಳಿಗೆ ನಿಯಂತ್ರಣ ಹೇರಬೇಕೆಂದು ನಿರ್ದೇಶನ ನೀಡಿದ್ದೆ ಎಂದು ತಿಳಿಸಿದರು.
ಅಕ್ರಮ ವಲಸೆ ಸಮಸ್ಯೆಯನ್ನು ನಮ್ಮ ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ, ಅಕ್ರಮ ವಲಸಿಗರು ಮತ್ತು ಅವರಿಗೆ ಆಶ್ರಯ ನೀಡುವವರು ಹಾಗೂ ಸಹಾಯ ಒದಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ರಾಜ್ಯದ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವವರ ಬಗ್ಗೆ ಸಮೀಕ್ಷೆ ನಡೆಸಿ ಕ್ರಮ ತೆಗೆದುಕೊಳ್ಳಲು ಈಗಾಗಲೆ ನಿರ್ದೇಶನ ನೀಡಲಾಗಿದೆ ಎಂದೂ ಆರಗ ಜ್ಞಾನೇಂದ್ರ ತಿಳಿಸಿದರು.

