ಹುಬ್ಬಳ್ಳಿ: ಆಸಿಡ್ ದಾಳಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲು ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಿ ರೂಪಿಸುವಂತೆ ಕಾನೂನು ತಜ್ಞರಿಗೆ ಸೂಚಿಸಲಾಗುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿಯಾಗಿರುವುದು ದುರದೃಷ್ಟಕರ. ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಚಿಂತನೆ ಇದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ತಿಳಿಸಿದರು.

