ಜೂನ್ 25ರೊಳಗೆ ದ್ವಿತೀಯ ಪಿಯು ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 20 ರಿಂದ 25ರೊಳಗೆ ಪ್ರಕಟವಾಗಲಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಒಂದು ತಿಂಗಳಾಗುತ್ತಿದೆ. ಇದರ ಬೆನ್ನಲ್ಲೇ ಪರೀಕ್ಷಾ ಫಲಿತಾಂಶ ಬಿಡುಗಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕರ್ನಾಟಕದಲ್ಲಿ ಮೇ18ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿತ್ತು.

ನೋಂದಣಿ ಮಾಡಿದ ಪ್ರಾಧ್ಯಾಪಕರು ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದ ಕಾರಣ ಪರೀಕ್ಷೆ ಫಲಿತಾಂಶ ಪ್ರಕಟದಲ್ಲಿ ವಿಳಂಬವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಈ ಬಾರಿ ಪಿಯುಸಿ ಫಲಿತಾಂಶ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸಲು ಶಿಕ್ಷಣ ಸಚಿವರು ಸೂಚಿಸಿದ್ದಾರೆ.