ಜೂ. 20ರಂದೇ ಮೈಸೂರಿಗೆ ಮೋದಿ

ಮೈಸೂರು: ಅಂತರರಾಷ್ಟ್ರೀಯ ಯೋಗ ದಿನ‌ ಜೂ.21.ಆದರೆ ಪ್ರಧಾನಿ ನರೇಂದ್ರ ಮೋದಿಯವರು 20 ರಂದೇ ಮೈಸೂರಿಗೆ ಆಗಮಿಸಲಿರುವುದು ವಿಶೇಷ.

ಜೂ.20ರಂದು ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ.

ಜೂ.21ರಂದು ಬೆಳಿಗ್ಗೆ 6.30ರಿಂದ 7.45ರವರೆಗೆ ಅರಮನೆ ಆವರಣದಲ್ಲಿ ನಡೆಯಲಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ 8.30ರಿಂದ 9ಗಂಟೆಯವರೆಗೂ ಅಂದರೆ 30ನಿಮಿಷಗಳ ಕಾಲ ಅರಮನೆಯಲ್ಲಿ ರಾಜಮನೆತನದ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲಿದ್ದಾರೆ.

ಜೂ.20ರಂದೇ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿಯವರು ಬೆಂಗಳೂರಿನಲ್ಲಿ  ಸಬರ್ಬನ್ ರೈಲ್ವೆ ಯೋಜನೆಗೆ ಶಿಲಾನ್ಯಾಸ ನೆರವೇರಿಸಿ ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಂತರ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಮೈಸೂರಿಗೆ ಆಗಮಿಸುವರು.

ಪ್ರಧಾನಿಯವರು ಸುತ್ತೂರು ಮಠಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದ್ದು ಬಳಿಕ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ದರ್ಶನ ಪಡೆದು ಅಲ್ಲಿಂದ ಬ್ಲೂ ಪ್ಲಾಜಾ ಹೋಟೆಲ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಿ ಬೆಳಗಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೈಸೂರಿನ ಕಾರ್ಯಕ್ರಮದ ನಂತರ‌ ಪ್ರಧಾನಿ ಕೇರಳದ ತಿರುವನಂತಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ.