ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ನೇಮಕಾತಿಗಳು ನಡೆಯಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ಅವರು ಖಾಲಿ ಹುದ್ದೆಗಳಿಗೆ ಒಂದುವರೆ ವರ್ಷದಲ್ಲಿ ನೇಮಕಾತಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಮೊದಲು ಚುನಾವಣೆ ಪ್ರಚಾರದ ವೇಳೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ಭರವಸೆ ನೀಡಿದ್ದರು.
ಬಳಿಕ ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗಲಿಲ್ಲ. ಬದಲಾಗಿ ಆರ್ಥಿಕ ಹಿಂಜರಿತ, ಕೋವಿಡ್ ಕಾರಣಗಳಿಂದ ಉದ್ಯೋಗಗಳು ಕಡಿತವಾಗಿದ್ದವು. ಇದು ಪ್ರತಿಪಕ್ಷಗಳಿಗೆ ಟೀಕಾಸ್ತ್ರ ನೀಡಿತ್ತು.
ಮುಂದಿನ ಒಂದೂವರೆ ವರ್ಷದಲ್ಲಿ ಅಭಿಯಾನದ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ.

