ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಲೋಕಾಯುಕ್ತರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ಬು.ಎಸ್. ಪಾಟೀಲ್ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಷವಾಗಿತ್ತು.
ಪಾಟೀಲ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.
ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಹಾಗೂ ನಂತರ ಕರ್ನಾಟಕ ಲೋಕಾಯುಕ್ತದಲ್ಲಿ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

