ಯೋಗ ದಿನಾಚರಣೆ:ಯದುವೀರ್ ಗೆ ಆಹ್ವಾನ ನೀಡಿದ ಜಿಲ್ಲಾಡಳಿತ

ಮೈಸೂರು: ಮೈಸೂರು ಅರಮನೆ ಆವರಣದಲ್ಲಿ ಜೂ.21ರಂದು ಆಯೋಜಿಸಲಾಗಿರುವ ಯೋಗ ಕಾರ್ಯಕ್ರಮಕ್ಕೆ ಮೈಸೂರು ರಾಜಮನೆತನದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರನ್ನು ಆಹ್ವಾನಿಸಲಾಗಿದೆ.

ಜೂನ್ 21 ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲು  ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಸಜ್ಜಾಗಿದೆ.

ಯೋಗ ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳುವ ವಿಚಾರ ಕುರಿತು ಚರ್ಚೆಯಾಗಿತ್ತು.

ಇದೀಗ ವಿವಾದ ಬಳಿಕ ಎಚ್ಚೆತ್ತ  ಮೈಸೂರು ಜಿಲ್ಲಾಡಳಿತ ಪ್ರಧಾನಿ ಮೋದಿ ಅವರ ಜತೆ ವೇದಿಕೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಆಹ್ವಾನ ನೀಡಿದೆ.

ಈ ಹಿಂದೆ ಯೋಗ ವೇದಿಕೆಗೆ ಐವರಿಗೆ ಮಾತ್ರ ಅವಕಾಶ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿತ್ತು. 

ಪ್ರಧಾನಮಂತ್ರಿ,‌ ಸಿಎಂ, ರಾಜ್ಯಪಾಲರು, ಜಿಲ್ಲಾ ಉಸ್ತುವಾರಿ‌ ಹಾಗೂ ಕೇಂದ್ರ ಆಯುಷ್ ಮಂತ್ರಿಗಳು‌ ಮಾತ್ರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿತ್ತು.

ಇದೀಗ ರಾಜ್ಯ ಸರ್ಕಾರ ಗಣ್ಯರ ಪಟ್ಟಿಯಲ್ಲಿ ಯದುವೀರ್ ಹಾಗೂ ಪ್ರಮೋದಾದೇವಿ ಅವರ ಹೆಸರು ಸೇರಿಸಿದೆ.

ಯೋಗಾಭ್ಯಾಸದ ನಂತರ ಮೈಸೂರು ಅರಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಆಹ್ವಾನ‌ದ ಮೇರೆಗೆ ನರೇಂದ್ರ ಮೋದಿ ಅರಮನೆಗೆ ಭೇಟಿ ನೀಡಲಿದ್ದಾರೆ.

ಸುಮಾರು ಒಂದು ಗಂಟೆಗಳ‌ ಕಾಲ ಅರಮನೆಯಲ್ಲಿ ರಾಜ ವಂಶಸ್ಥರ ಜೊತೆ ಪ್ರಧಾನಿ  ಮಾತುಕತೆ ನಡೆಸಲಿದ್ದಾರೆ.